Oplus_131072

 

ಕಲಬುರಗಿ :
ಕಲ್ಯಾಣ ಕರ್ನಾಟಕ ಭಾಗದ 46 ವಿವಿಧ ಯೋಜನೆಗಳಿಗೆ  11770 ಕೋಟಿ ರೂಪಾಯಿ ಮೀಸಲಿಡಲಾಗಿದೆ  ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು

ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮತ್ತು ಬೀದರ್ ಹಾಗೂ ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಪರಿವರ್ತಿಸುವ ಹಾಗೂ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗಾಗಿ 7200 ಕೋಟಿ ರೂಪಾಯಿ ಮಿಸಲಿಡಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಅವರು ಕಲ್ಯಾಣ ಕರ್ನಾಟಕದ ಭಾಗಕ್ಕೆ 56 ವಿಷಯಗಳನ್ನು ಚರ್ಚಿಸಲಾಗಿದೆ. ಇವುಗಳಲ್ಲಿ 46 ವಿಷಯಗಳು ಈ ಭಾಗಕ್ಕೆ ಸಂಬಂಧಪಟ್ಟ ವಿಷಯಗಳಾಗಿದ್ದು, ಅವು ಈ ಸಭೆಯಲ್ಲಿ ಮಂಡಿಸಲಾಗಿದ್ದ 56 ವಿಷಯಗಳ 12692 ಕೋಟಿ ರೂ.ಗಳ ಯೋಜನೆಗಳ ಪ್ರಸ್ತಾವನೆ ಮಾಡಲಾಗಿದೆ ಎಂದರು.

ನಾರಾಯಣಪುರ ಡ್ಯಾಂ ನಿಂದ ನೀರು ತರುವ ಯೋಜನೆ ಕೇಂದ್ರ ಸರ್ಕಾರದ ಪಾಲುದಾರಿಕೆ ಯೋಜನೆಯಿದಾಗಿದ್ದು, 7200 ಕೋಟಿ ರೂ.ಗಳಲ್ಲಿ ಅರ್ಧ ಭಾಗದ ಅನುದಾನವನ್ನು ಕೇಂದ್ರ ಸರ್ಕಾರ ನೀಡಬೇಕಿದೆ ಎಂದು ಹೇಳಿದರು

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಭಾಗಕ್ಕೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಂವಿಧಾನ ತಿದ್ದುಪಡಿಗೊಂಡು 371 (ಜೆ) ಜಾರಿಗೆ ಬಂದ ನಂತರ ಈವರೆಗೆ ಅನುದಾನ ನೀಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರವೂ ಕೂಡ ಈ ಭಾಗದ ಅಭಿವೃದ್ಧಿಗೆ 5000 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ ಮಾಡಲು ಈ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಯಿತು ಎಂದರು.

ಖಾಲಿ ಹುದ್ದೆಗಳ ನೇಮಕಾತಿಗೆ ಕ್ರಮ :

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿಯಿರುವ ಒಟ್ಟು 17439 ಹುದ್ದೆಗಳನ್ನು ಹಂತ ಹಂತವಾಗಿ  ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

2013 ರಿಂದ 2018 ವರೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2014 ರಲ್ಲಿಯು ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. 2012 ರಲ್ಲಿ ಮನಮೋಹನ್ ಸಿಂಗ್ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನ ತಿದ್ದುಪಡಿ ಮಾಡಲಾಯಿತು. ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರ ಹೋರಾಟದಿಂದ 371 ಜೆ ಜಾರಿಗೆ ತರಲಾಯಿತು.

ವಿಶೇಷ ಸವಲತ್ತುಗಳನ್ನು ಕಲ್ಯಾಣ ಕರ್ನಾಟಕದ ಭಾಗಕ್ಕೆ ನೀಡುವ ಉದ್ದೇಶದಿಂದ 2013 ರಲ್ಲಿ ಸಂವಿಧಾನ ತಿದ್ದುಪಡಿಯಾದ ನಂತರ ನಮ್ಮ ಸರ್ಕಾರದ ಅವಧಿಯಲ್ಲಿ ಈ ಕಾನೂನಿನ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು ಎಂದರು.

2002 ರಲ್ಲಿ ನಂಜುಂಡಪ್ಪ ವರದಿಯಂತೆ ಪ್ರಾದೇಶಿಕ ಅಸಮತೋಲನವನ್ನು ಪರಿಹರಿಸಲು ಸಮಿತಿ ರಚಿಸಲಾಗಿತ್ತು. ಪ್ರಸ್ತುತ ಈ ಭಾಗದ ತಾಲ್ಲೂಕುಗಳ ಸ್ಥಿತಿಗತಿಯ ಪರಿಶೀಲನೆ ನಡೆಸಲು ಡಾ.ಗೋವಿಂದ ರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಈ ಸಮಮಿಯನ್ನು ರಚಿಸಲಾಗಿದ್ದು, ಸಮಿತಿ ವರದಿ ಬಂದ ನಂತರ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಾಗೂ 31 ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲು , 9 ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ 2 ತಾಲ್ಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಇದಕ್ಕೆ 890 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದೆಂದು‌ ಹೇಳಿದರು.

One thought on “ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ.”

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ